ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಶಿಗ್ಗಾಂವಿ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಟಿಕೆಟ್ ಅಲ್ಪಸಂಖ್ಯಾತರ ಪಾಲಾಗಿದೆ. ಯಾಸಿರ್ ಅಹಮದ್ ಖಾನ್ ಪಠಾಣ್ ಕಾಂಗ್ರೆಸ್ ಟಿಕೆಟ್ ಗಿಟ್ಟಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.
ಕ್ಷೇತ್ರದಲ್ಲಿ ಕಳೆದ ನಾಲ್ಕು ಚುನಾವಣೆಗಳಲ್ಲೂ ಅಲ್ಪಸಂಖ್ಯಾತ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಸೋಲು ಕಂಡಿತ್ತು. ಈ ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಇತ್ತ, ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಪಟ್ಟು ಹಿಡಿದಿದ್ದರು.ಹೀಗಾಗಿ ಕೊನೆಗೂ ಟಿಕೆಟ್ ಗಿಟ್ಟಿಸುವಲ್ಲಿ ಜಮೀರ್ ಯಶಸ್ವಿಯಾಗಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಲೋಕಸಭೆಯಲ್ಲಿ ಸ್ಪರ್ಧಿಸಿ ಗೆದ್ದ ಹಿನ್ನೆಲೆ ತೆರವಾಗಿದ್ದ ಶಿಗ್ಗಾಂವಿ ಎಂಎಲ್‌ಎ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರು ಕಣದಲ್ಲಿದ್ದಾರೆ. ಪುತ್ರನನ್ನು ಗೆಲ್ಲಿಸಿಕೊಳ್ಳಲು ಬಸವರಾಜ ಬೊಮ್ಮಾಯಿ ಅವರು ಕಸರತ್ತು ನಡೆಸುತ್ತಿದ್ದಾರೆ.