ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಗ್ಗಾಂವಿ ಉಪಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲರೂ ಜನತಾ ನ್ಯಾಯಾಲಯದ ಮುಂದೆ ಪ್ರಮಾಣ ವಚನ ಸ್ವೀಕರಿಸಿದ್ದೇವೆ.
ಯಾರಿಗೆ ಟಿಕೆಟ್ ಬಂದರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ನತ್ತ ಚಿತ್ತ ನೆಟ್ಟಿದೆ. ಕಳೆದ ನಾಲ್ಕು ತಿಂಗಳಿಂದ ಬಿಡುವಿಲ್ಲದೆ ಕ್ಷೇತ್ರದಲ್ಲಿ ಸಂಚರಿಸುತ್ತಿದ್ದೇನೆ ಎಂದರು.