ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್ ಮೇಲೆ ರೌಡಿಶೀಟರ್ ಕೇಸ್?: ಹಾವೇರಿ ಎಸ್ಪಿ ಕೊಟ್ಟ ಸ್ಪಷ್ಟನೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾವೇರಿ ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪ ಮಾಡಿದ್ದಾರೆ.

ಇದರ ಮಧ್ಯ ಯಾಸೀರ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಪ್ರಕರಣದ ಬಗ್ಗೆ ಸ್ವತಃ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹಲವು ಕೇಸ್​ಗಳು ಇವೆ. ಆದ್ರೆ,ಅವರು ಅಫಿಡೆವಿಟ್​​ನಲ್ಲಿ ತಿಳಿಸಿಲ್ಲ. ಈ ಮೂಲಕ ಚುನಾವಣಾಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ. ರಾಜ್ಯ ಹಾಗೂ ಕೇಂದ್ರ ಚುನಾವಣೆಗೆ ನಾವು ಅರ್ಜಿ ಸಲ್ಲಿಸ್ತೇವೆ. ಕೂಡಲೇ ಚುನಾವಣಾಧಿಕಾರಿಗಳು ಕಾರ್ಯ ಪ್ರವೃತ್ತರಾಗಲಿ. ಡಿಸಿ ಮೇಲೆ‌ ದೊಡ್ಡ ಜವಾಬ್ದಾರಿ ಇದೆ. ಏನಿದೆ ಸ್ಟೇಟಸ್ ಎಂದು ಸ್ಪಷ್ಟಪಡಿಸಲಿ. ಇಲ್ಲದಿದ್ದರೆ ಅಧಿಕಾರಿಗಳು ಕಟಕಟೆಯಲ್ಲಿ ನಿಲ್ಲಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಇದೀಗ ಹಾವೇರಿ ಎಸ್​ಪಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಯಾಸೀರ್ ಪಠಾಣ್​ ಅವರ ಮೇಲೆ ರೌಡಿಶೀಟ್​ ಇದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಸಂಬಂಧ ಶಿಗ್ಗಾಂವಿ ಡಿಎಸ್​​ಪಿ ಹಾಗೂ ಪಿಎಸ್​ಐ ಕಚೇರಿಯಿಂದ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಯಾಸೀರ್ ಪಠಾಣ್​ ಅವರ ಮೇಲೆ ಯಾವುದೇ ರೀತಿಯ ರೌಡಿಶೀಟ್​ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ತಮಗೆ ಬೈ ಎಲೆಕ್ಷನ್ ಟಿಕೆಟ್​ ಕೈತಪ್ಪಿದ ಬಳಿಕ ಪಠಾಣ್ ಓರ್ವ ರೌಡಿಶೀಟರ್ ಎಂದು ಆರೋಪಿಸಿದ್ದರು. ಇದನ್ನೇ ಇಟ್ಟುಕೊಂಡು ಇದೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಠಾಣ್ ಮೇಲೆ ರೌಡಿ ಶೀಟರ್ ಕೇಸ್ ಇದೆ,

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!