ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಶಿಖರ್ ಧವನ್

ಹ‌ೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್‌ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 38 ವರ್ಷ ವಯಸ್ಸಿನ ಧವನ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ.

2022ರ ಬಾಂಗ್ಲಾದೇಶ ಪ್ರವಾಸದ ನಂತರ ಧವನ್ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇದಾಗ್ಯೂ ಅವರು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಅದರಲ್ಲೂ ದುಲೀಪ್ ಟ್ರೋಫಿಗೆ ಆಯ್ಕೆ ಮಾಡಲಾದ ನಾಲ್ಕು ತಂಡಗಳಲ್ಲೂ ಅವರ ಹೆಸರು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ನಿವೃತ್ತಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ಮುಕ್ತಾಯಗೊಳಿಸುತ್ತಿದ್ದೇನೆ. ಈ ಪ್ರಯಾಣದಲ್ಲಿ ನಾನು ನನ್ನೊಂದಿಗೆ ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯನ್ನು ಹೊಂದಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ಜೈ ಹಿಂದ್! ಎಂದು ಧವನ್ ವಿಡಿಯೋದಲ್ಲಿ ಹೇಳಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!