spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿಲ್ಪಾ ಶೆಟ್ಟಿ ಮಾನಹಾನಿ ಪ್ರಕರಣ: ಚ್ಯುತಿ ಎನಿಸುವ ವಿಡಿಯೋಗಳನ್ನು ತೆಗೆದು ಹಾಕುವಂತೆ ಬಾಂಬೆ ಹೈಕೋರ್ಟ್​ ಆದೇಶ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಶಿಲ್ಪಾ ಶೆಟ್ಟಿಗೆ ಸಂಬಂಧಿಸಿದ ಮಾನಹಾನಿ ಎನಿಸುವ ಕೆಲವು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾ ಹಾಗೂ ಮಾಧ್ಯಮಗಳಿಂದ ತೆಗೆದು ಹಾಕುವಂತೆ ಬಾಂಬೆ ಹೈಕೋರ್ಟ್​ ಆದೇಶ ಹೊರಡಿಸಿದೆ.
ಮಾಧ್ಯಮಗಳು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ತಪ್ಪಾದ, ಅವಹೇಳನಕಾರಿ, ಸುಳ್ಳು ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸುತ್ತಿವೆ. ಈ ಮೂಲಕ ಖಾಸಗಿತನಕ್ಕೆ ಚ್ಯುತಿ ತರುತ್ತಿವೆ ಎಂದು ಕೋರ್ಟ್​ಗೆ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿಲ್ಪಾ ಶೆಟ್ಟಿ ಉಲ್ಲೇಖ ಮಾಡಿದ್ದರು.
ಈ ಕುರಿತು ವಿಚಾರಣೆ ಕೈಗೊತ್ತಿಕೊಂಡ ಕೋರ್ಟ್ , ಪತ್ರಿಕಾ ಸ್ವಾತಂತ್ರ್ಯ ಮತ್ತು ಖಾಸಗಿತನದ ಹಕ್ಕಿನ ನಡುವೆ ಸಮತೋಲನ ಇರಬೇಕು. ಈ ಹಂತದಲ್ಲಿ ಬರುವ ಎಲ್ಲಾ ಹೇಳಿಕೆಗಳು ಮಾನ ಹಾನಿ ಎಂದು ಹೇಳಲು ಸಾಧ್ಯವಿಲ್ಲ. ಅವುಗಳನ್ನು ನಾವು ಸೂಕ್ಷ್ಮವಾಗಿ ಪರಿಶೀಲನೆ ಮಾಡಬೇಕಾಗುತ್ತದೆ. ಪ್ರಾಥಮಿಕ ಹಂತದಲ್ಲಿ ಮಾನಹಾನಿ ಎನಿಸುವ ವಿಡಿಯೋಗಳನ್ನು ತೆಗೆಯಿರಿ ಎಂದು ಆದೇಶಿಸಿದೆ.
ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು? ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದು ಅವರ ಜೀವನದ ಒಂದು ಭಾಗ. ಈ ಹಿಂದೆ ಕೂಡ ಈ ವಿಚಾರಕ್ಕೆ ಸಂಬಂಧಿಸಿ ಹಲವು ತೀರ್ಪು ನೀಡಲಾಗಿತ್ತು. ಎಷ್ಟು ಬಾರಿ ಇದನ್ನೇ ಹೇಳಬೇಕು? ಪೊಲೀಸ್​ ಮೂಲಗಳು ಹೇಳಿವೆ ಎಂದು ವರದಿಯಾದರೆ ಅದು ಎಂದಿಗೂ ಮಾನಹಾನಿಯಾಗುವುದಿಲ್ಲ. ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ?’ ಎಂದು ನ್ಯಾಯಮೂರ್ತಿ ಜಿಎಸ್​ ಪಟೇಲ್ ಅವರು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಆರಂಭದಲ್ಲಿ ಪ್ರಶ್ನೆ ಮಾಡಿದ್ದರು.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss