ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಮುಂಬೈ ಕೋರ್ಟ್ ಜಾಮೀನು ನೀಡಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆಯೇ ಅವರ ಪತ್ನಿ ಶಿಲ್ಪಾ ಶೆಟ್ಟಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.
ಹೌದು.. ಇನ್ ಸ್ಟಾಗ್ರಾಂ ನಲ್ಲಿ ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. ‘ಕೆಟ್ಟ ಚೆಂಡಮಾರುತದ ನಂತರ ಒಳ್ಳೆಯದು ನಡೆಯುತ್ತದೆ ಎಂಬುದನ್ನು ಸೂಚಿಸುವುದಕ್ಕಾಗಿಯೇ ಕಾಮನಬಿಲ್ಲು ಇರುವುದು’ ಎಂದು ಬರೆದುಕೊಂಡಿದ್ದಾರೆ.
ಶಿಲ್ಪಾ ಶೆಟ್ಟಿ ಯಾವ ಅರ್ಥದಲ್ಲಿ ಈ ಸಾಲುಗಳನ್ನು ಹಂಚಿಕೊಂಡಿದ್ದಾರೆ ಎಂಬುದು ನಿಜಕ್ಕೂ ಅಭಿಮಾನಿಗಳಿಗೆ ಬಗೆಹರಿಯುತ್ತಿಲ್ಲ. ಕೆಲವರು ಇದನ್ನು ಖುಣಾತ್ಮಕವಾಗಿ ತೆಗೆದುಕೊಂಡರೆ, ಕೆಲವರು ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ.. ಸದ್ಯಕ್ಕಂತೂ ಶಿಲ್ಪಾ ಶೆಟ್ಟಿ ಬಗ್ಗೆ ಹಲವು ಬಗೆಯ ಅಂತೆ-ಕಂತೆಗಳು ಹರಿದಾಡುತ್ತಿವೆ.