Tuesday, March 28, 2023

Latest Posts

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು: ಸಿಎಂ ಬೊಮ್ಮಾಯಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಿಕಟಪೂರ್ವ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರು ಅಂತಿಮವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇದನ್ನು ಘೋಷಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರು ಇಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಆದರೆ ನನ್ನ ಹೆಸರು ಬೇಡ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಕೆಲಸ ಮಾಡಿದವರಿಗೆ ಮುಜುಗರ ಸಹಜ. ಆದರೆ ಪ್ರೀತಿ-ವಿಶ್ವಾಸಕ್ಕೆ ಮನ್ನಣೆ ಕೊಡಲೇಬೇಕು. ಹಾಗಾಗಿ ಯಡಿಯೂರಪ್ಪ ಹೆಸರನ್ನು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತಿದೆ ಎಂದು ಪ್ರಕಟಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!