ಶಿವಮೊಗ್ಗ| ಸ್ಥಳೀಯರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಸೆರೆ

ಹೊಸದಿಗಂತ ವರದಿ, ಶಿವಮೊಗ್ಗ:

ಭದ್ರಾವತಿ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀ ವಸತಿ ಗೃಹದಲ್ಲಿ ಬುಧವಾರ ಬೆಳಗ್ಗೆ ಕಾಣಿಸಿಕೊಂಡು ಸ್ಥಳೀಯರಲ್ಲಿ
ಭಯ ಹುಟ್ಟಿಸಿದ್ದ ಚಿರತೆಯೊಂದನ್ನು ಸುಮಾರು 4 ಗಂಟೆಗೂ ಹೆಚ್ಚು ಸಮಯ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಬೆಳಗ್ಗೆ ಪಾಳು ಬಿದ್ದಿದ್ದ ಮನೆಯಿಂದ ಏಕಾಏಕಿ ಹೊರಬಂದು ಕಾಣಿಸಿಕೊಂಡಿದ್ದ ಚಿರತೆ ಮಹಿಳೆಯೊಬ್ಬರ ಮೈ ಪರಚಿ ಮತ್ತೊಂದು ಮನೆಯ ಹಿಂಬದಿಯಲ್ಲಿ ಅವಿತುಕೊಂಡಿತ್ತು. ತಕ್ಷಣ ಮಾಹಿತಿ ತಿಳಿದ ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಕೈಗೊಂಡರು. ಚಿರತೆ ಬೇರೆ ಕಡೆಗೆ ತಪ್ಪಿಸಿಕೊಳ್ಳದಂತೆ ಎಚ್ಚರ ವಹಿಸಿದ ಅರಣ್ಯ ಸಿಬ್ಬಂದಿಗಳು ಸುತ್ತುವರೆದು ಕಾರ್ಯಾಚರಣೆ ನಡೆಸಿದರು.
ವನ್ಯಜೀವಿ ವಿಬಾಗದ ಶಿವಮೊಗ್ಗ ವೃತ್ತದ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿನಯ್ ಅವರ ತಂಡ ಚುಚ್ಚು ಮದ್ದು ನೀಡಿದ ನಂತ ಅರಣ್ಯ ಸಿಬ್ಬಂದಿಗಳು ಚಿರತೆಯನ್ನು ಬಲೆ ಬೀಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!