ಆ.31ರಿಂದ ಶಿವಮೊಗ್ಗ-ಬೆಂಗಳೂರು ವಿಮಾನಯಾನ ಸೇವೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆ.31ರಿಂದ ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆ ಆರಂಭವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಗುರುವಾರದಿಂದ ವಿಮಾನಯಾನ ಸೇವೆಗಳು ಆರಂಭವಾಗಲಿವೆ, ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಹಾಗೂ ಶೈಕ್ಷಣಿಕ ಬೆಳವಣಿಗೆ ಹೆಚ್ಚಾಗಲಿದೆ ಎಂದಿದ್ದಾರೆ.

ಇಂಡಿಗೋ ಸಂಸ್ಥೆಯ ವಿಮಾನವು ಗುರುವಾರ ಬೆಳಗ್ಗೆ 9:50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11:05ಕ್ಕೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಲ್ಲಿ ವಿಮಾನ ಇಳಿದೊಡನೆ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!