ಶಿವಮೊಗ್ಗ: ಸಕ್ರೆಬೈಲು ತುಂಗಾ ಜಲಾಶಯದ ಹಿನ್ನೀರಿನಲ್ಲಿ ದೋಣಿವಿಹಾರಕ್ಕೆ ಚಾಲನೆ

ಹೊಸದಿಗಂತ ವರದಿ, ಶಿವಮೊಗ್ಗ :
ನಗರಕ್ಕೆ ಸಮೀಪದ ಸಕ್ರೆಬೈಲು ಆನೆಗಳ ಬಿಡಾರಕ್ಕೆ ಹೊಂದಿಕೊಂಡಿರುವ ತುಂಗಾ ಜಲಾಶಯದ ಹಿನ್ನೀರಿನಲ್ಲಿ ದೋಣಿ ವಿಹಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.
ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ದೋಣಿ ವಿಹಾರವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ, ಸಕ್ರೆಬೈಲಿನ ಹಿನ್ನೀರಿನ ದೋಣಿವಿಹಾರ ಮತ್ತು ಇಲ್ಲಿನ ಪ್ರಾಕೃತಿಕ ಸೊಬಗು ಅತ್ಯಾಕರ್ಷಕವಾಗಿದೆ. ಪ್ರವಾಸಿಗರನ್ನು ಸೆಳೆಯುವುದರಲ್ಲಿ ಸಂಶಯವಿಲ್ಲ. ಈ ದೋಣಿ ವಿಹಾರ ಕೇಂದ್ರವು ಅತ್ಯಲ್ಪ ಕಾಲದಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಗೊಂಡು ಕಾರ್ಯನಿರ್ವಹಿಸಲಿದೆ ಎಂದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ನಿರೀಕ್ಷೆಗೆ ಮೀರಿದ ಪ್ರಗತಿ ಸಾಧಿಲು ವಿಫುಲ ಅವಕಾಶಗಳಿರುವುದು ಗುರುತಿಸಲಾಗಿದೆ. 460 ಕೋಟಿ ರೂ. ವೆಚ್ಚದಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ, 1ಕೋಟಿ ರೂ.ವೆಚ್ಚದಲ್ಲಿ ಹೊಸನಗರದ ಕೋಟೆ, 2 ಕೋಟಿ ರೂ. ವೆಚ್ಚದಲ್ಲಿ ಕವಲೇದುರ್ಗ, 2 ಕೋಟಿ ರೂ. ವೆಚ್ಚದಲ್ಲಿ ಶಿವಪ್ಪನಾಯಕನ ಅರಮನೆ, ಅಕ್ಕಮಹಾದೇವಿ ಜನ್ಮಸ್ಥಳ ಉಡುಗಣಿ, ವಿಶ್ವವಿಖ್ಯಾತ ಜೋಗ ಜಲಪಾತದ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!