ಶಿವಮೊಗ್ಗ :
ಶಿವಮೊಗ್ಗದಿಂದ ಚೆನೈಗೆ ಎಕ್ಸ್‌ಪ್ರೆಸ್ ರೈಲಿನ ಸೇವೆಯು ಜುಲೈ 13ರಿಂದ ಪ್ರಾರಂಭಗೊಳ್ಳುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶನಿವಾರ ಸಂಜೆ 05.15ಕ್ಕೆ ಶಿವಮೊಗ್ಗ ಬಿಡುವ ಈ ರೈಲು ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸಿಕೆರೆ, ತಿಪಟೂರು, ತುಮಕೂರು, ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಕೆ.ಆರ್.ಪುರಂ, ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಜೋಲಾರಪೇಟೆ, ಕಾಟಪಾಡಿ, ಸೋಲಿಂಗರ್, ಅರಕೋಣಂ, ಪೆರಂಬೂರು ಮಾರ್ಗವಾಗಿ ಭಾನುವಾರ ಬೆಳಿಗ್ಗೆ 04.55ಕ್ಕೆ ಚೆನೈ ತಲುಪುತ್ತದೆ. ಭಾನುವಾರ ರಾತ್ರಿ 11.30ಕ್ಕೆ ಚೆನೈ ಬಿಡುವ ಈ ರೈಲು ಮಾರನೇ ದಿನ ಸೋಮವಾರ ಮಧ್ಯಾಹ್ನ 12.20ಕ್ಕೆ ಶಿವಮೊಗ್ಗ ತಲುಪುತ್ತದೆ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದೀಯವರ 3.0 ಸರ್ಕಾರ ಪ್ರಾರಂಭಗೊಂಡ 1 ತಿಂಗಳೊಳಗೆ ನಮ್ಮ ಹಲವು ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿ ಪ್ರಪ್ರಥಮವಾಗಿ ಶಿವಮೊಗ್ಗ-ಚೆನೈ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲನ್ನು ಮಂಜೂರು ಮಾಡಿರುವ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದೀ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಮಹತ್ತರ ಕೊಡುಗೆ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣರವರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.