ಶಿವಮೊಗ್ಗ, ಚಿಕ್ಕಮಗಳೂರು, ಉ.ಕ. ಜಿಲ್ಲೆ ವಿಭಾಗದ ಪ್ರಮುಖರ ಸಭೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿಭಾಗದ ಪ್ರಮುಖರ ಸಭೆಯನ್ನು ಶಿವಮೊಗ್ಗದಲ್ಲಿಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಉದ್ಘಾಟಿಸಿದರು.

ಈ ವೇಳೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ್ ಸಿದ್ಧಿ, ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಜೀವರಾಜ್, ಡಿ.ಎಸ್. ಸುರೇಶ್, ಸುನೀಲ್ ನಾಯಕ್ ಸೇರಿದಂತೆ ಬಿಜೆಪಿಯ ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಬಿ.ವೈ. ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಲ್ಲಿ ವಿಕಸಿತ ಭಾರತ ಗುರಿ ಸಾಧನೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಶೀಘ್ರದಲ್ಲೇ ಎದುರಾಗಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಸಂಘಟನೆಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿಗಳಿಂದ ಜನರು ಭ್ರಮನಿರಶನಗೊಂಡಿದ್ದು, ಈ ನಿಟ್ಟಿನಲ್ಲಿ ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here