ಖಾಕಿ ಕಣ್ಗಾವಲಿನಲ್ಲಿ ಶಿವಮೊಗ್ಗ: ಭದ್ರತೆಗಾಗಿ ಹೆಚ್ಚುವರಿ ಪೊಲೀಸರ ಆಗಮನ

ಹೊಸದಿಗಂತ ಆನ್‌ಲೈನ್ ಡೆಸ್ಕ್

ಭಾನುವಾರ ನಡೆದ ಭಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಹಾಗೂ ಬಳಿಕ ಶಿವಮೊಗ್ಗ ನಗರದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣದ ಹಿನ್ನೆಲೆಯಲ್ಲಿ ಎಡಿಜಿಪಿ ಮುರಗನ್ ಹಿರಿಯ ಇಲಾಖಾ ಅಧಿಕಾರಿಗಳೊಂದಿಗೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಖಾಕಿ ಸರ್ಪಗಾವಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಸಂಭಾವ್ಯ  ಪರಿಸ್ಥಿತಿ ನಿಯಂತ್ರಿಸಲು ಬೆಂಗಳೂರಿನಿಂದ ಹೆಚ್ಚುವರಿಯಾಗಿ ೨೧೨ ಪೊಲೀಸರನ್ನು ಕಳುಹಿಸಲಾಗಿದೆ.
ಈ ನಡುವೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದಿಂದ ನೇರ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಶಿವಮೊಗ್ಗ ನಗರದ ಪರಿಸ್ಥಿತಿ ಕುರಿತು ವಿವರ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!