ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ.

ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6) ಮೃತಪಟ್ಟವರು. ಘಟನಾ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಶವಪರೀಕ್ಷೆಗಾಗಿ ಶವವನ್ನು ನಗರದ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ, ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!