ಶಿವಮೊಗ್ಗ ಕೊಲೆ ಪ್ರಕರಣ: ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ – ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದರು.

ಕಾಂಗ್ರೆಸ್ ಅನುಭವದ ಮಾತು:
ಇದು ಸರಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್ ನವರು ಈ ಹಿಂದೆ ಸರಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ ಲೇವಡಿ ಮಾಡಿದರು.

ದಿಲ್ಲಿ ಪ್ರಯಾಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ದಿಲ್ಲಿ ಹೋಗುವ ಉದ್ದೇಶ ಇಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!