ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಸಿಎಂ ಬೊಮ್ಮಾಯಿಗೆ ಯಡಿಯೂರಪ್ಪ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರಿಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿದ್ದು, ಅಲ್ಲದೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದ್ದರು.

ಇದೀಗ ತಮ್ಮ ಹೆಸರು ಇಡೋದು ಬೇಡ ಮಹನೀಯರ ಹೆಸರಿಡುವಂತೆ ಸಿಎಂಗೆ ಪತ್ರ ಬರೆದು ಯಡಿಯೂರಪ್ಪ ಕೋರಿದ್ದಾರೆ.
ಈ ಕುರಿತಂತೆ ಸಿಎಂ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದು, ಶಿವಮೊಗ್ಗ ಜಿಲ್ಲೆಯ ಬಹು ದಿನಗಳ ಕನಸು ವಿಮಾನ ನಿಲ್ದಾಣವಾಗಿದೆ. ಈ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾನು ವೀಕ್ಷಿಸಿದ್ದೇನೆ. ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದಾಗಿ ತಾವು ಘೋಷಿಸಿದ್ದೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು, ಇದಕ್ಕಾಗಿ ಜಿಲ್ಲೆಯ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಮುಖಂಡರಿಗೆ ಕೃತಜ್ಞತೆಗಳು. ರಾಜ್ಯದ ಅಭಿವೃದ್ಧಿಗೆ ಸೇಲೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದರೇ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಅಭಿಪ್ರಾಯ ಪಟ್ಟಿದ್ದಾರೆ.

ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು. ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿರುವಂತ ಮಹನೀಯರ ಹೆಸರನ್ನು ಇಡುವಂತೆ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!