ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ ಬಿಗ್ ಶಾಕ್ ಎದುರಾಗಿದ್ದು, ರೈತರಿಂದ ಕೊಂಡುಕೊಳ್ಳುವ ಪ್ರತಿ ಲೀ.ಹಾಲಿನ ಬೆಲೆಯನ್ನು ಶಿಮುಲ್ 90 ಪೈಸೆ ಇಳಿಸಿದೆ.
ನಷ್ಟದ ನೆಪವೊಡ್ಡಿ ಪ್ರತಿ ಲೀ.ಹಾಲಿನ ಬೆಲೆಯನ್ನು 90 ಪೈಸೆಗೆ ಇಳಿಸಿದೆ.ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 90 ಪೈಸೆಯಷ್ಟು ಕಡಿತಗೊಳಿಸಲಾಗಿದೆ.
ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಅ. 1ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.
ಇಂದು ನಡೆದ ಶಿಮೂಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟವಾದ ಶಿಮೂಲ್ ನಿಂದ ರೈತರಿಗೆ ಸಂಕಷ್ಟ ಎದುರಾಗಿದೆ.