ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಬೆಂಗಳೂರಿನ ಆರ್ಕಿಡ್ಸ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ‘ಶೈನ್ ಯುವರ್ ಸಿಟಿ’ ಅಭಿಯಾನ ಕೈಗೊಳ್ಳಲಾಗಿದೆ.
ಈ ವರ್ಷ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ನಾಗರಿಕರನ್ನು ಉತ್ತೇಜಿಸಲು ಆರ್ಕಿಡ್ ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿಯೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗಿದೆ.
ಖ್ಯಾತ ಪರಿಸರವಾದಿ ಸುರೇಶ್ ಹಬ್ಳೀಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಪ್ರಕೃತಿಯನ್ನು ಪೋಷಿಸಿ, ಬೆಳೆಸಲು ಯುವ ಮನಸ್ಸುಗಳನ್ನು ಪ್ರೇರೇಪಿಸಬೇಕು ಎಂದು ಹಬ್ಳೀಕರ್ ಹೇಳಿದ್ದಾರೆ.