ಮಾ.15ರಿಂದ ಶಿರಸಿ ಮಾರಿಕಾಂಬಾ ಜಾತ್ರೆ: 3-4 ಲಕ್ಷ ಜನ ಸೇರುವ ನಿರೀಕ್ಷೆ

ಹೊಸದಿಗಂತ ವರದಿ, ಶಿರಸಿ:

ರಾಜ್ಯದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾದ ಶಿರಸಿ ಮಾರಿಕಾಂಬಾ ಜಾತ್ರೆ ಮಾ. 15 ರಿಂದ ನಡೆಯಲಿದ್ದು, ಜಾತ್ರೆಯ ಸಿದ್ದತೆಗಳು ಆರಂಭವಾಗಿದೆ.
ಇಲ್ಲಿನ ಮಿನಿ ವಿಧಾನ ಸೌಧದಲ್ಲಿ ಜಾತ್ರಾ ಸಿದ್ದತೆಗಳ ಬಗ್ಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭದ್ರತೆ, ವಿದ್ಯುತ್ ವ್ಯವಸ್ಥೆ, ಸಿಸಿ ಕ್ಯಾಮರಾ, ಪಾರ್ಕಿಂಗ್ ವ್ಯವಸ್ಥೆಯನ್ನು ಸುವ್ಯವಸ್ಥಿತವಾಗಿ ಮಾಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದರು.
ಶಿರಸಿ ಉಪವಿಭಾಗಾಧಿಕಾರಿಯಿಂದ ಜಾತ್ರೆಯ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಜಾತ್ರೆಯಲ್ಲಿ 3 ರಿಂದ 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ ಜಾತ್ರೆ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಜಾತ್ರೆ ಸಮಯದಲ್ಲಿ ಎಷ್ಟು ವಿದ್ಯುತ್ ಲೋಡ್ ಬೇಕಿದೆ ಎನ್ನುವುದನ್ನು ಮಾಹಿತಿ ಸಂಗ್ರಹಿಸಿ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕಿದೆ. ಎಲ್ಲ ಸಮಸ್ಯೆಗೆ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಿಕೊಳ್ಳಿ ಎಂದು ಸೂಚಿಸಿದರು.
ಬಸ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ನೀರಿನ ವ್ಯವಸ್ಥೆ, ಶೌಚಾಲಯ ಎಲ್ಲವನ್ನು ಸಮರ್ಕಪವಾಗಿ ನಿರ್ವಹಿಸುವಂತೆ ಸೂಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!