ಹೊಸದಿಗಂತ ಆನ್ ಲೈನ್ ಡೆಸ್ಕ್:
ವಿಧಾನಸಭೆಯ ಅಧಿವೇಶನ ಪ್ರಾರಂಭವಾಗಿದ್ದು, “ಒಂದು ದೇಶ ಒಂದು ಚುನಾವಣೆ” ವಿರುದ್ಧ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಾಸಕ ಬಿ.ಕೆ. ಸಂಗಮೇಶ್ ಅವರು ಸದನದಲ್ಲೇ ಶರ್ಟ್ ಬಿಚ್ಚಿ ಗಲಾಟೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವೈಯಕ್ತಿಕ ವಿಚಾರಗಳ ಬಗ್ಗೆ ಆರೋಪ ಮಾಡುತ್ತಿದ್ದ ಶಾಸಕ ಸಂಗಮೇಶ್ ಅವರು ಬಟ್ಟೆ ಬಿಚ್ಚಿ ಕೂಗಾಡಿದ್ದಾರೆ.
ಸಂಗಮೇಶ್ ವರ್ತನೆಗೆ ಕಿಡಿಕಾರಿದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ರಾಷ್ಟ್ರೀಯ ಪಕ್ಷದ ಸದಸ್ಯರು ಈ ರೀತಿ ನಡೆದುಕೊಳ್ಳಬಾರದು. ಮತ್ತೆ ಈ ರೀತಿ ನಡೆದುಕೊಂಡರೆ ಸದನದಿಂದ ಹೊರಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬಳಿಕ ಸ್ಪೀಕರ್ ಸದನವನ್ನು 15 ನಿಮಿಷಗಳ ಕಾಲ ಮುಂದೂಡಿದರು.