ಹೊಸದಿಗಂತ ವರದಿ, ಅಂಕೋಲಾ:
ಶಿರೂರು ದುರಂತದ ಶೋಧ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರ ಕೈ ಗೊಂಡಿರುವ ಕ್ರಮಗಳಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳ ಸರ್ಕಾರದ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ದುರಂತ ಸಂಭವಿಸಿದ ದಿನದಿಂದ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಉತ್ತರ ಕನ್ನಡ ಜಿಲ್ಲಾಡಳಿತ ರಕ್ಷಣಾ ಕಾರ್ಯ ಮತ್ತು ಶೋಧ ಕಾರ್ಯಾಚರಣೆಗೆ ಕೈಗೊಂಡ ಕ್ರಮಗಳಿಗೆ ಕೃತಜ್ಞರಾಗಿರುವುದಾಗಿ ತಿಳಿಸಿರುವ ಅವರು ವಿಶೇಷವಾಗಿ ಕಾರವಾರ ಅಂಕೋಲಾ ಶಾಸಕ ಸತೀಶ ಸೈಲ್ ಅವರು ಶೋಧ ಕಾರ್ಯಾಚರಣೆಯಲ್ಲಿ ಪ್ರತಿದಿನ ಉಪಸ್ಥಿತರಿದ್ದು ಹೆಚ್ಚಿನ ಕಾಳಜಿ ವಹಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.