ಹೊಸದಿಗಂತ ವರದಿ,ಅಂಕೋಲಾ:
ತಾಲೂಕಿನ ಶಿರೂರು ಗುಡ್ಡ ಕುಸಿತದ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದ ಮೂಳೆ ದನದ ಮೂಳೆ ಎಂದು ವೈಜ್ಞಾನಿಕ ಪರೀಕ್ಷೆಯಿಂದ ದೃಡಪಟ್ಟಿರುವುದಾಗಿ ತಿಳಿದು ಬಂದಿದೆ.
ರವಿವಾರ ಸಂಜೆ ಕಾರ್ಯಾಚರಣೆಯಲ್ಲಿ ಮೂಳೆ ಪತ್ತೆಯಾಗಿದ್ದರಿಂದ ಇದು ಶಿರೂರು ದುರಂತದಲ್ಲಿ ಗಂಗಾವಳಿ ನದಿಯಲ್ಲಿ ಕಣ್ಮರೆಯಾಗಿರುವ ಮೂವರಲ್ಲಿ ಯಾರದಾದರೂ ಮೂಳೆ ಇರಬಹುದು ಎಂಬ ಜಿಜ್ಞಾಸೆಗೆ ಕಾರಣವಾಗಿತ್ತು.
ಇದೀಗ ಮೂಳೆ ಪರೀಕ್ಷೆ ನಡೆಸಿ ವರದಿ ನೀಡಲಾಗಿದ್ದು ದನದ ಮೂಳೆ ಎಂದು ವರದಿ ನೀಡಿರುವುದಾಗಿ ತಿಳಿದು ಬಂದಿದೆ.