ಹೊಸದಿಗಂತ ಅಂಕೋಲಾ :
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಬೆಂಜ್ ಲಾರಿ ಮತ್ತು ಕೇರಳದ ಕೋಝೀಕ್ಕೋಡ್ ನ ಚಾಲಕ ಅರ್ಜುನ್ ಪತ್ತೆಗಾಗಿ ಬಾಂಬ್ ನಿಷ್ಕ್ರೀಯ ಮೆಟಲ್ ಡಿಕ್ಟೇಟರ್ ಮೂಲಕ ಪತ್ತೆ ಕಾರ್ಯ ಭರದಿಂದ ನಡೆದಿದೆ.
ನೇವಿ ಅಧಿಕಾರಿಗಳು , ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ , ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಮೀಪದ ನದಿಯಲ್ಲಿ ಕೂಡಾ ತಪಾಸಣೆ ನಡೆಸಿದ್ದಾರೆ.
ನೆಲದಲ್ಲಿ ಶೋಧ ಕಾರ್ಯ ನಡೆಸಲು ರಾಡಾರ್ ತರಿಸಲಾಗಿದೆ. ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಇದ್ದರು.