ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಂಡಿದೆ.
ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗ್ಗೆ ನಿಧಾನಗತಿಯಲ್ಲಿ ಪುನರಾರಂಭಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಭಾರೀ ಮಳೆ ಮತ್ತು ಸ್ಥಳದಲ್ಲಿ ಸಣ್ಣ ಭೂಕುಸಿತದಿಂದಾಗಿ ಸ್ಥಗಿತಗೊಂಡಿದೆ.
ಗುಡ್ಡದ ಭಾಗವು ಜಾರುತ್ತಲೇ ಇದೆ, ಇದು ಎನ್‌ಡಿಆರ್‌ಐ ಮತ್ತು ಇತರ ರಕ್ಷಣಾ ಸಿಬ್ಬಂದಿಗೆ ಅಪಾಯವನ್ನುಂಟುಮಾಡುವ ಸಾಧ್ಯತೆಯಿದ. ಭಾರೀ ಮಳೆಯು ಭೂಕುಸಿತಗಳನ್ನು ಉಂಟುಮಾಡುತ್ತಿದೆ ಮತ್ತು ಕಾರ್ಯಾಚರಣೆಯನ್ನು ಮುಂದುವರಿಸಲು ನಾವು ರಕ್ಷಣಾ ಸಿಬ್ಬಂದಿಯನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ರಕ್ಷಣಾ ಕಾರ್ಯ ಮೇಲ್ವಿಚಾರಣೆ ಮಾಡುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.