ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿaತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಶಿವಸೇನಾ ಸಂಸದ ವಿನಾಯಕ್ ರಾವುತ್ ಅವರ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಮಾಲ್ವಾನ್ನಲ್ಲಿರುವ ಬಂಗಲೆಯ ಮೇಲೆ ದುಷ್ಕರ್ಮಿಗಳು ಸೋಡಾ ನೀರಿನ ಬಾಟಲಿಗಳನ್ನು ಎಸೆದು ಕ್ರೌರ್ಯ ಮೆರೆದಿದ್ದಾರೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮುಂಬೈನಿಂದ ಸುಮಾರು 500 ಕಿ.ಮೀ ದೂರದಲ್ಲಿರುವ ಮಾಲ್ವನ್ನ ರಾವುತ್ವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
ನಾಲ್ಕು ಜನ ಅಪರಿಚಿತ ವ್ಯಕ್ತಿಗಳು ರಾವುತ್ ಅವರ ನಿವಾಸದ ಮೇಲೆ ಸೋಡಾ ನೀರಿನ ಬಾಟಲಿ ಎಸೆದು, ಸ್ಥಳದಿಂದ ಓಡಿಹೋಗಿದ್ದಾರೆ. ಘಟನೆ ಬಳಿಕ ಮನೆಯ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ರಾವುತ್ ಅವರ ಬಂಗಲೆ ಉಸ್ತುವಾರಿ ನೀಡಿರುವ ದೂರಿನ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಅವರಿಗಾಗಿ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ.