ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಕ್ಷಮೆಯಾಚಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜರನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುವವರು ಮತ್ತು ಘಟನೆಯಿಂದ ತೀವ್ರವಾಗಿ ನೊಂದಿರುವವರ ಬಳಿ ನಾನು ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ಇದಕ್ಕಿಂತ ದೊಡ್ಡದು ಏನು ಇಲ್ಲ ಎಂದು ಮೋದಿ ತಿಳಿಸಿದ್ದಾರೆ.
ಈ ನೆಲದ ಮಗ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಮತ್ತು ಅವಮಾನಿಸುವವರು ನಾವಲ್ಲ, ಆದ್ರೆ ಅವರು ಕ್ಷಮೆ ಕೇಳಲು ಸಿದ್ಧರಿಲ್ಲ, ನ್ಯಾಯಾಲಯದ ಮೊರೆ ಹೋಗಿ ಹೋರಾಟಕ್ಕೆ ಸಿದ್ಧರಿದ್ದಾರೆ ಎಂದು ಹೇಳಿದರು.
ಬಿಜೆಪಿ ನನ್ನನ್ನು 2013ರಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಹೆಸರಿಸಿತ್ತು. ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಭಕ್ತನಾಗಿ ಕುಳಿತು ಹೊಸ ಪ್ರಯಾಣವನ್ನು ಪ್ರಾರಂಭಿಸಿದ್ದಾಗಿ ತಿಳಿಸಿದರು.
ಕಡಲ ರಕ್ಷಣೆ ಮತ್ತು ಭದ್ರತೆಯಲ್ಲಿ, ಮರಾಠ ನೌಕಾಪಡೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಪರಂಪರೆಯನ್ನು ಗೌರವಿಸುವ ಉದ್ದೇಶದಿಂದ ಮೊದಲ ಬಾರಿಗೆ ಸಿಂಧುದುರ್ಗದಲ್ಲಿ ನಡೆದ ನೌಕಾಪಡೆಯ ದಿನಾಚರಣೆಯ ಅಂಗವಾಗಿ ಕಳೆದ ವರ್ಷ ಡಿಸೆಂಬರ್ 4ರಂದು ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.