Friday, March 24, 2023

Latest Posts

ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೆಳಗಾವಿಯ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣ ಮಾಡಿದ್ದಾರೆ.

ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಆರ್.ಐ.ಡಿ.ಎಲ್. ಸಹಯೋಗದೊಂದಿಗೆ ರಾಜಹಂಸಗಡದ ಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಶಿವಾಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಂತರ ರಿಬ್ಬನ್‌ ಕಟ್‌ ಮಾಡುವ ಮೂಲಕ ಮುಖ್ಯಮಂತ್ರಿಗಳು ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು.

ಈ ವೇಳೆ ರಾಜಹಂಸಗಡದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಸಿಎಂ ಚಾಲನೆ ನೀಡಿದರು. ಸಚಿವ ಗೋವಿಂದ ಕಾರಜೋಳ, ಸುನೀಲ್ ಕುಮಾರ್, ಸಂಸದೆ ಮಂಗಳಾ ಅಂಗಡಿ, ಶಾಸಕರಾದ ಅಭಯ. ಪಾಟೀಲ, ಅನಿಲ ಬೆನಕೆ, ರಮೇಶ್ ಜಾರಕಿಹೊಳಿ, ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನಾಲ್ಕುವರೆ ಕೋಟಿ ವೆಚ್ಚದಲ್ಲಿ ರಾಜಹಂಸಗಡ ಕೋಟೆ ಅಭಿವೃದ್ಧಿ ಮಾಡಲಾಗಿದ್ದು, ಇದರ ಭಾಗವಾಗಿ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆಯನ್ನೂ ಸ್ಥಾಪನೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!