ಏ.14ಕ್ಕೆ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದೆ ‘ಶಿವಾಜಿ ಸುರತ್ಕಲ್ 2’

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮೂರು ವರ್ಷಗಳ ಹಿಂದೆ ಬಿಡುಗಡೆಯಾಗಿ ಜನರ ಮನಗೆದ್ದ ರಮೇಶ್ ಅರವಿಂದ್ ಅಭಿನಯದ ಪತ್ತೇದಾರಿ ಚಿತ್ರ ‘ಶಿವಾಜಿ ಸುರತ್ಕಲ್’ ಮುಂದುವರೆದ ಭಾಗ ‘ಶಿವಾಜಿ ಸುರತ್ಕಲ್–ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಇದೇ ಶುಕ್ರವಾರದಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಮೂಲಕ ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಮೊದಲ ಭಾಗದಂತೆಯೇ ಈ ಚಿತ್ರವೂ ಸಹ ಒಂದು ಮರ್ಡರ್ ಮಿಸ್ಟ್ರಿಯಾಗಿದ್ದು, ಚಿತ್ರದಲ್ಲಿ ನಡೆಯುವ ಕೊಲೆಗಳಿಗೂ, ನಾಯಕ ಶಿವಾಜಿಗೂ ಒಂದು ನಂಟಿರುತ್ತದೆ. ಆ ನಂಟೇನು? ಕೊಲೆಗಳ ಹಿಂದಿರುವ ಕಥೆಯೇನು? ಮತ್ತು ಕೊಲೆಗಾರ ಯಾರು? ಎಂಬುದೇ ಈ ಚಿತ್ರದ ಕಥಾಹಂದರ.

‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ನಾಜರ್, ರಮೇಶ್ ಭಟ್, ವೀಣಾ ಸುಂದರ್, ವಿನಾಯಕ್ ಜೋಶಿ, ಶೋಭರಾಜ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!