March 30, 2026
Monday, March 30, 2026
spot_img

ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ | ಏ.1ಕ್ಕೆ ತುಮಕೂರಿಗೆ ಬರಲಿರುವ ರಾಷ್ಟ್ರಪತಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಏಪ್ರಿಲ್ 1ರಂದು ತ್ರಿವಿಧ ದಾಸೋಹಿ, ಶತಾಯುಷಿ ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಮಹಾಶಿವಯೋಗಿಗಳ 119ನೇ ಜನ್ಮದಿನೋತ್ಸವ ಅದ್ದೂರಿಯಾಗಿ ನಡೆಯಲಿದೆ.

ಈ ಅಭೂತಪೂರ್ವ ಕ್ಷಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಕ್ಷಿಯಾಗಲಿದ್ದಾರೆ. ಆ ದಿನ ಪ್ರಾತಃ ಕಾಲದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನಡೆಯಲಿದೆ. ವಿವಿಧ ಮಠ ಮಾನ್ಯಗಳ ಸಾಧು ಸಂತರ ಮಂತ್ರಘೋಷಗಳೊಂದಿಗೆ ಪೂಜಾ ಕೈಂಕರ್ಯ ನೆರವೇರಲಿದೆ.

ರಾಷ್ಟ್ರಪತಿಗಳು ಅಂದು ಬೆಳಗ್ಗೆ 10:30ಕ್ಕೆ ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ. ಆರಂಭದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಆರತಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಶ್ರೀ ಮಠದ 10 ಸಾವಿರ ವಿದ್ಯಾರ್ಥಿಗಳನ್ನು ನೋಡಿ ಚುಟುಕಾಗಿ ಮಾತನಾಡಲಿದ್ದಾರೆ. ಬಳಿಕ ಉದ್ದಾನಶ್ರೀ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !