Wednesday, July 6, 2022

Latest Posts

ಶಿವಮೊಗ್ಗ| ಭದ್ರಾವತಿಯ ನರ್ಸಿಂಗ್ ವಿದ್ಯಾರ್ಥಿಯಲ್ಲಿ ಒಮಿಕ್ರಾನ್ ಪತ್ತೆ

ಹೊಸದಿಗಂತ ವರದಿ, ಶಿವಮೊಗ್ಗ:

ದೇಶದ ವಿವಿಧ ಕಡೆಗಳಲ್ಲಿ ಸದ್ದು ಮಾಡುತ್ತಿರುವ ಕೊರೋನ ರೂಪಾಂತರಿ ಒಮಿಕ್ರಾನ್ ಸೋಂಕು ಜಿಲ್ಲೆಗೂ ಕಾಲಿಟ್ಟಿದೆ. ಇದು ಜಿಲ್ಲೆಯಲ್ಲಿ ಆತಂಕವನ್ನು ಮೂಡಿಸಿದೆ.
ಭದ್ರಾವತಿಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಯಲ್ಲಿ ಒಮಿಕ್ರಾನ್ ಪತ್ತೆ ಆಗಿರುವ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಭದ್ರಾವತಿಯ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಕಳೆದ ವಾರ ಕೊರೋಮ ಸೋಂಕು ಕಾಣಿಸಿತ್ತು. ಬಳಿಕ ಇವರ ಗಂಟಲ ದ್ರವವನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿತ್ತು. ಅದರಲ್ಲಿ ಓರ್ವ ವಿದ್ಯಾರ್ಥಿ ಒಮಿಕ್ರಾನ್ ಸೋಂಕು ಹೊಂದಿರುವುದು ಕಂಡುಬಂದಿದೆ. ವಿದ್ಯಾರ್ಥಿಯನ್ನು ಐಸೋಲೇಶನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೋಂಕಿತ ವಿದ್ಯಾರ್ಥಿ ಯಾವುದೇ ವಿದೇಶಕ್ಕೆ ಹೋಗಿರುವ ಮಾಹಿತಿ ಇಲ್ಲ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss