ಶಿವಮೊಗ್ಗ| ಮಕ್ಕಳಲ್ಲಿ ಹೆಚ್ಚಿದ ಕೋವಿಡ್‌ ಸೋಂಕು: ಜ.21ರವರೆಗೆ ಶಾಲೆ ಬಂದ್

ಹೊಸದಿಗಂತ ವರದಿ, ಶಿವಮೊಗ್ಗ:

ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳಲ್ಲೂ ಕೊರೋನಾ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ 1 ರಿಂದ 9 ನೇ ತರಗತಿ ಶಾಲೆಗಳಿಗೆ ಜನವರಿ 19 ರಿಂದ 21ರವರೆಗೆ ರಜೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 45 ಶಾಲೆಗಳ 208 ಮಕ್ಕಳು ಮತ್ತು ಶಿಕ್ಷಕರಿಗೆ ಕೊರೋನ ಸೋಂಕು ಕಾಣಿಸಿಕೊಂಡಿದೆ. ಇನ್ನುಳಿದ ತಾಲೂಕುಗಳಲ್ಲಿ ಅಷ್ಟು ಪ್ರಮಾಣದ ಸೋಂಕು ಇಲ್ಲ. ನಗರ ಪ್ರದೇಶದಲ್ಲಿ ಮತ್ತಷ್ಟು ಮಕ್ಕಳಿಗೆ ಸೋಂಕು ಹರಡುವುದು ತಡೆಯುವ ಸಾಲುವಾಗಿ ಐದು ದಿನ ತರಗತಿಗಳನ್ನು ಬಂದ್ ಮಾಡಲಾಗುತ್ತಿದೆ ಎಂದರು.
ಜನವರಿ 19 ರಿಂದ 21ರವರೆಗೆ ಶಾಲೆಗಳಿಗೆ ರಜೆ ನೀಡಲಾಗುತ್ತಿದೆ. 22 ಮತ್ತು 23 ರಂದು ಈಗಾಗಲೇ ಘೋಷಿತವಾಗಿರುವ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಆ ಅವಧಿಯಲ್ಲಿ ಶಾಲೆಗಳಿಗೆ ರಜೆ ಇದೆ. ಸೋಮವಾರದಂದ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಇನ್ನುಳಿದ ಗ್ರಾಮಾಂತರ ಮತ್ತು ತಾಲೂಕು ಕೇಂದ್ರಗಳಲ್ಲಿ ಎಂದಿನಂತೆ ಶಾಲೆಗಳು ನಡೆಯಲಿವೆ ಎಂದರು.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪೊಲೀಸ್ ಬಿ.ಎಂ.ಲಕ್ಷ್ಮೀಪ್ರಸಾದ್ ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!