ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಪ್ರಕರಣದ ಕೇಂದ್ರಬಿಂದು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಕರೆತಂದ ಪೊಲೀಸರು, ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆತನ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಗುರುವಾರ ಮಧ್ಯಾಹ್ನ ಕೋರ್ಟ್ ಆವರಣಕ್ಕೆ ಆಗಮಿಸಿದ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರಾಗುವ ತನಕವೂ ಪೊಲೀಸ್ ವಾಹನದಲ್ಲಿಯೇ ಕುಳಿತಿದ್ದ. ಆತನಿಗೆ ಪೊಲೀಸರು ಭದ್ರತೆ ಕಲ್ಪಿಸಿದ್ದರು.
ಶಿವಮೊಗ್ಗ TO ಬೆಳ್ತಂಗಡಿ: ಪೊಲೀಸ್ ಭದ್ರತೆಯಲ್ಲಿ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರು
