ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆ ಮುಗಿಸಿ ವಿಶ್ರಾಂತಿ ಪಡೆಯುತ್ತಿರುವ ನಟ ಶಿವರಾಜ್‌ಕುಮಾರ್ ಕೊನೆಗೂ ತವರಿಗೆ ಮರಳಿರುವ ಸಿಹಿ ಸುದ್ದಿ ಪ್ರಕಟಿಸಿದ್ದಾರೆ. ಜನವರಿ 26 ಗಣರಾಜ್ಯೋತ್ಸವ ದಿನದಂದು ಬೆಂಗಳೂರಿಗೆ ವಾಪಸ್ಸಾಗುತ್ತೇನೆ ಎಂದು ಶಿವಣ್ಣ ಹೇಳಿದ್ದಾರೆ.
ಬೆಂಗಳೂರಿಗೆ ಬರುವ ಬಗ್ಗೆ ನಟ ಶಿವಣ್ಣ ವೀಡಿಯೋ ಮಾಡಿ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳ ಎಲ್ಲಾ ಪ್ರೀತಿ ಮತ್ತು ಹಾರೈಕೆಗಳಿಗೆ ನಟ ಧನ್ಯವಾದ ಹೇಳಿದ್ದಾರೆ.
ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ಪ್ರೀತಿಯ ಶಿವರಾಜಕುಮಾರ್. ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಚಿರಋಣಿ. ಜನವರಿ 26ರ ಗಣರಾಜ್ಯೋತ್ಸವದಂದು ನಿಮ್ಮೆಲ್ಲರನ್ನು ನೋಡಲು ಬೆಂಗಳೂರಿಗೆ ಬರುತ್ತೇನೆ ಎಂದು ನಟ ಶಿವರಾಜಕುಮಾರ್ ಅಭಿಮಾನಿಗಳಿಗೆ ತಿಳಿಸಿದ್ದಾರೆ.