September 29, 2026
Tuesday, September 29, 2026
spot_img

ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಸಂಭ್ರಮ, ನಾಳೆಯಿಂದ ಐದು ದಿನ ಜಾತ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾ ಶಿವರಾತ್ರಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ನಡೆಯಲಿದೆ.

ಅದ್ಧೂರಿ ಶಿವರಾತ್ರಿ ಜಾತ್ರೆಗೆ ಸಕಲ ತಯಾರಿ ನಡೆದಿದ್ದು, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಐದು ದಿನಗಳ ಕಾಲ ನಡೆಯುವ ಈ ಜಾತ್ರೆಗೆ ದೂರ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ. ದರುಶನಕ್ಕೆ ಲೈನ್‌ ವ್ಯವಸ್ಥೆ ಮಾಡಲಾಗಿದೆ. ಇನ್ನು ಐದು ದಿನವೂ ಬೆಟ್ಟದಲ್ಲೇ ಇರುವವರಿಗೆ ಉಳಿದುಕೊಳ್ಳಲು ಜಾಗ ಮಾಡಲಾಗಿದೆ. ಇನ್ನು ಪಾದಯಾತ್ರೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

Must Read