ಹೊಸದಿಗಂತ ವರದಿ, ಚಿತ್ರದುರ್ಗ:
ಕೋವಿಡ್-೧೯ರ ಹಿನ್ನಲೆಯಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿಯನ್ನು ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್-೧೯ರ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿಯನ್ನು ಇದೇ ಜನವರಿ ೧೫ರಂದು ಬೆಳಿಗ್ಗೆ ೧೧ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ, ಭೋವಿ ಸಮಾಜದ ಕಾರ್ಯದರ್ಶಿ ಲಕ್ಷ್ಮಣ್, ಭೋವಿಗುರುಪೀಠದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೌನಹಳ್ಳಿ ಗೋವಿಂದಪ್ಪ, ಡಿವೈಎಸ್‌ಪಿ ಪಾಂಡುರಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.