ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಶಿವಮೊಗ್ಗ:
ಜಿಲ್ಲೆಯಲ್ಲಿ ಶನಿವಾರ 714 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 427 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ13 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 478 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ 310, ಭದ್ರಾವತಿ 36, ಶಿಕಾರಿಪುರ 39, ತೀರ್ಥಹಳ್ಳಿ 99, ಸೊರಬ 67, ಸಾಗರ 137 ಹೊಸನಗರ 02 ಹಾಗೂ ಹೊರ ಜಿಲ್ಲೆಯ 24 ಪ್ರಕರಣ ದಾಖಲಾಗಿವೆ. ಜಿಲ್ಲೆಯಲ್ಲಿ 4488 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 1732 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 577 ಜನ, ಖಾಸಗಿ ಆಸ್ಪತ್ರೆಯಲ್ಲಿ 411 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 113 ಜನರಿದ್ದು, ಡಿಸಿಎಚ್ ಸಿಯಲ್ಲಿ 135 ಜನ ಹಾಗೂ
2965 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.