Wednesday, August 10, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 22 ಜನರಲ್ಲಿ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಶಿವಮೊಗ್ಗ:

ಜಿಲ್ಲೆಯಲ್ಲಿ ಶುಕ್ರವಾರ 22 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 48 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ 10, ಭದ್ರಾವತಿ 05, ತೀರ್ಥಹಳ್ಳಿ 07, ಶಿಕಾರಿಪುರ 01, ಸಾಗರ 07, ಹೊಸನಗರ 12, ಸೊರಬ 00 ಹಾಗೂ ಹೊರ ಜಿಲ್ಲೆಯ 01 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 238 ಸಕ್ರಿಯ ಪ್ರಕರಣಗಳಿವೆ. 3452 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 55 ಜನ, ಖಾಸಗಿ ಆಸ್ಪತ್ರೆಯಲ್ಲಿ 07 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 19 ಜನರಿದ್ದು, ಡಿಸಿಎಚ್ ಸಿಯಲ್ಲಿ 11 ಜನ ಹಾಗೂ 144 ಸೋಂಕಿತರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss