ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಶಿವಮೊಗ್ಗ:
ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆ ವತಿಯಿಂದ ಭಾನುವಾರ ಕೊರೋನಾ ಸೊಂಕಿತರಿಗೆ ಉಪಯೋಗವಾಗುವ ಜೀವ ರಕ್ಷಕ ಸಾಧನಗಳು, 16 ಲಕ್ಷ ರೂ. ಮೌಲ್ಯದ ವೆಂಟಿಲೇಟರ್, 2ಲಕ್ಷ ರೂ.ಮೌಲ್ಯದ ಆಕ್ಸಿಜನ್ ಸಾಂದ್ರಕಗಳು ಹಾಗೂ ಇತರೆ ಪರಿಕರಗಳನ್ನು ಶಿವಮೊಗ್ಗ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಅಧ್ಯಕ್ಷರೂ ಆದ ಶಿವಮೊಗ್ಗ ಕೆ.ಬಿ.ಶಿವಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪರಿಕರಗಳನ್ನು ಸಿಮ್ಸ್ ನಿರ್ದೇಶಕ ಡಾ. ಎ.ಒ.ಸಿದ್ದಪ್ಪ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಾಖೆ ಅಧ್ಯಕ್ಷ ಎಸ್.ಪಿ.ದಿನೇಶ್, ಉಪಾಧ್ಯಕ್ಷ ಡಾ.ವಿ ಎಲ್ ಎಸ್ ಕುಮಾರ್, ಜಿಪಂ ಸಿಇಒ ಎಂ.ಎಲ್. ವೈಶಾಲಿ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್, ವಿಜಯಕುಮಾರ್ ಮೊದಲಾದವರು ಇದ್ದರು.