Wednesday, August 17, 2022

Latest Posts

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಮಾಸಿಕ 5 ಸಾವಿರ, ಮಕ್ಕಳಿಗೆ ಉಚಿತ ಶಿಕ್ಷಣ: ಶಿವರಾಜ್ ಸಿಂಗ್ ಚೌಹಾಣ್‌ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್‌ನಿಂದ ಬಾಧಿತವಾಗಿರುವ ಕುಟುಂಬಗಳಿಗೆ ಮಾಸಿಕ 5 ಸಾವಿರ ರೂಪಾಯಿ ಹಾಗೂ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡುವುದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಘೋಷಿಸಿದ್ದಾರೆ.
ಕುಟುಂಬಕ್ಕೆ ಆಸರೆಯಾಗಿದ್ದವರು ಸೋಂಕಿನಿಂದ ಮೃತಪಟ್ಟಿದ್ದರೆ ಅಂಥವರ ಕುಟುಂಬಗಳಿಗೆ ಸ್ವಉದ್ಯೋಗ ಕೈಗೊಳ್ಳಲು ಬಡ್ಡಿರಹಿತವಾಗಿ ಸರ್ಕಾರ ಸಾಲ ಒದಗಿಸಲಾಗುವುದು. ತಂದೆ-ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ಆ ಕುಟುಂಬಗಳು ಅರ್ಹರಲ್ಲದಿದ್ದರೂ ಉಚಿತವಾಗಿ ಪಡಿತರ ನೀಡಲಾಗುತ್ತದೆ ಎಂದು ತಿಳಿಸಿದರು.
ಕೋವಿಡ್‌ನಿಂದಾಗಿ ಹಲವಾರು ಕುಟುಂಬಗಳು ಬಾಧಿತವಾಗಿದ್ದು, ಮಕ್ಕಳ ಕಾಳಜಿಯನ್ನು ಸರ್ಕಾರವೇ ವಹಿಸಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!