Sunday, June 4, 2023

Latest Posts

ಚೊಚ್ಚಲ ಸಿನಿಮಾ ನಿರ್ಮಾಣದತ್ತ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ

ಹೊಸ ದಿಗಂತ ವರದಿ ಡಿಜಿಟಲ್ ಡೆಸ್ಕ್:

ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ತಂದೆಯ ಹಾದಿಯಲ್ಲೇ ಸಾಗುತ್ತಿದ್ದು, ಗೀತಾ ಪಿಕ್ಚರ್ಸ್ ನಡಿ ಗೀತಾ ಶಿವರಾಜ್ ಕುಮಾರ್, ಪಿಆರ್ ಕೆ ಪ್ರೊಡಕ್ಷನ್ ನಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿ ಚಿತ್ರರಂಗಕ್ಕೆ ದುಡಿಯುತ್ತಿದ್ದಾರೆ. ಈಗ ಶಿವಣ್ಣನ ದ್ವಿತೀಯ ಪುತ್ರಿ ನಿವೇದಿತಾ ತಮ್ಮದೇ ಒಡೆತನದ ನಿರ್ಮಾಣ ಸಂಸ್ಥೆಯಡಿ ಚೊಚ್ಚಲ ಚಿತ್ರದ ನಿರ್ಮಾಣಕ್ಕಿಳಿದಿದ್ದಾರೆ.

ಮೇ 1ರಂದು ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ ಎಂಬ ಪೋಸ್ಟರ್ ಮೂಲಕ ತಮ್ಮ ಹೊಸ ಹೆಜ್ಜೆಯ ಬಗ್ಗೆ ತಿಳಿಸಿದ್ದಾರೆ.

ನಿವೇದಿತಾ ಒಡೆತನದ ಶ್ರೀ ಮುತ್ತು ಸಿನಿ ಸರ್ವಿಸ್ ನಡಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾಗೆ ವಂಶಿ ಸಾರಥಿ. ಈ ಹಿಂದೆ ‘ಮಾಯಾಬಜಾರ್’ ಸಿನಿಮಾದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ, ಇತ್ತೀಚೆಗೆ ತೆರೆಗೆ ಬಂದ ಐದು ಕಥೆಗಳ ‘ಪೆಂಟಗನ್’ ಸಿನಿಮಾದ ಕಿರಣ್ ಕುಮಾರ್ ನಿರ್ದೇಶಕದ ಕಥೆಯಲ್ಲಿ ಪ್ರಮುಖ ಪಾತ್ರವಾಗಿ ನಟಿಸಿದ್ದ ವಂಶಿ ನಿವೇದಿತಾ ಬಂಡವಾಳ ಹಾಕುತ್ತಿರುವ ಮೊದಲ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!