ಮೈಸೂರು ಅರಮನೆಯಲ್ಲಿ ಸಂಭ್ರಮದ ಶಿವರಾತ್ರಿ, ಹೇಗಿದೆ ಆಚರಣೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ರಾಜ್ಯಾದ್ಯಂತ ಶಿವರಾತ್ರಿ ಸಂಭ್ರಮ ಮನೆಮಾಡಿದೆ. ರಾಜ್ಯದ ಸಾಂಸ್ಕೃತಿಕ ರಾಜಧಾನಿಯಾದ ಮೈಸೂರಿನಲ್ಲಿ ಶಿವರಾತ್ರಿಯಂದು ಅರಮನೆಯಲ್ಲಿ ಪೂಜೆ ನಡೆಯಲಿದೆ.

ಅರಮನೆಯ ತ್ರಿನೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಲಿದೆ. ಶಿವಲಿಂಗಕ್ಕೆ ಸುಮಾರು 11 ಕೆಜಿ ತೂಕದ ಮುಖವಾಡ ಧಾರಣೆ ಮಾಡಲಾಗುತ್ತದೆ.

ಇದನ್ನು ಜಯಚಾಮರಾಜೇಂದ್ರರು ಕಾಣಿಕೆಯ ರೂಪದಲ್ಲಿ ನೀಡಿದ್ದರು. ವರ್ಷಕ್ಕೆ ಒಂದು ಬಾರಿ ಮಾತ್ರ ಶಿವನ ಚಿನ್ನದ ಮುಖವಾಡವನ್ನು ಧಾರಣೆ ಮಾಡಲಾಗುತ್ತದೆ. ಇದೀಗ ಸದ್ಯ ಚಿನ್ನದ ಶಿವನ ಮುಖವಾಡ ಮುಜರಾಯಿ ಇಲಾಖೆಯ ವಶದಲ್ಲಿದೆ. ಇಂದಿನಿಂದ ಮೂರು ದಿನಗಳ ಕಾಲ ದೇವರ ಮುಖವಾಡವನ್ನು ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!