ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತಿ ದೇವಿ ದರುಶನ ಪಡೆದರು.
ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರಿ ನಾಡಿನ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಆರ್ಶೀವಾದ ಪಡೆದರು.
ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆ ನಾಡದೇವಿ ಚಾಮುಂಡಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ. ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂ ಹಾಗೂ ನವಿಲಿನಗರಿ ಹಾರದ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 4:30ರಿಂದ ತಾಯಿಗೆ ವಿಶೇಷ ಪೂಜೆ ನೆರವೇರುತ್ತಿದೆ.