ಎಚ್.ಡಿ.ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ಮುಖಂಡರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಅರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿದರು.

ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಮಂಗಳವಾರ ಜೆ.ಪಿ.ನಗರದಲ್ಲಿನ ನಿವಾಸಕ್ಕೆ ಭೇಟಿ ನೀಡಿದ್ದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಆಗಮಿಸಿದ್ದು, ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಲಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡರು ಹಲವು ಬಾರಿ ಹೇಳಿದ್ದಾರೆ. ಇದನ್ನು ಸಾಕಾರಗೊಳಿಸಲು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕುಮಾರಸ್ವಾಮಿ ಪ್ರಚಾರಕ್ಕೆ ಬರುವಂತೆ ನಾನು ಕೇಳಿಕೊಂಡಿದ್ದೆ ಅವರು ಇದಕ್ಕೆ ಒಪ್ಪಿದ್ದರು. ನಾವು ಹೇಳಿದ ದಿನವೇ ಬಂದು ಪ್ರಚಾರ ಮಾಡುವುದಾಗಿ ಒಪ್ಪಿಕೊಂಡರು. ನರೇಂದ್ರ ಮೋದಿಯವರ ಸ್ಥಾನವನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ ಎಂದರು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!