ಶೋಭಾ ಕರಂದ್ಲಾಜೆ ಚುನಾವಣೆ ಪ್ರಚಾರದ ವೇಳೆ ದುರಂತ: ಕಾರಿನ ಡೋರ್ ಗೆ ಬೈಕ್‌ ಡಿಕ್ಕಿ, ಸವಾರ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಸವಾರನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ಸಮೀಪದ‌ ದೇವಸಂದ್ರ ವಿನಾಯಕ‌ ದೇವಸ್ಥಾನ ಬಳಿ ನಡೆದಿದೆ. ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಮೃತ ವ್ಯಕ್ತಿ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ನಿಂತಿದ್ದ ಕಾರಿನ ಬಾಗಿಲು ತೆರೆಯುವ ವೇಳೆ ಬೈಕ್‌ನಲ್ಲಿ ಬಂದ ಪ್ರಕಾಶ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಕಾಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕೆ.ಆರ್.ಪುರಂ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೆ.ಆರ್.ಪುರಂ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!