ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಮನೆಗೆ ಇಂದು ಭೇಟಿ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ, ಪುನೀತ್ ಪತ್ನಿ ಅಶ್ವಿನಿ ಅವರನ್ನು ಭೇಟಿ ಮಾಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಅಶ್ವಿನಿ ನಮ್ಮ ಕ್ಷೇತ್ರದಲ್ಲಿಯೇ ಇದ್ದಾರೆ. ನಮ್ಮ ಪಕ್ಷಕ್ಕೆ ಅವರ ಸಹಕಾರ, ಬೆಂಬಲ ಕೇಳಿದ್ದೇವೆ. ಚುನಾವಣಾ ಪ್ರಚಾರದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ.