ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ಬಗ್ಗೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ದೂರು ದಾಖಲಾಗಿದೆ.
ಮೈಸೂರಿನ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಲಿತರು ಮತ್ತು ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಶಾಸಕ ಮುನಿರತ್ನ ಕಟುವಾಗಿ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ಮುಖಂಡರು ಪತ್ರದ ಮೂಲಕ ದೂರು ನೀಡಿದ್ದಾರೆ.
ಶಾಸಕ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಜತೆಗೆ ಮತ್ತೊಂದು ಪ್ರಕರಣ ದಾಖಲಾಗಿದೆ.