Friday, June 2, 2023

Latest Posts

ವಿನಯ್ ಕುಲಕರ್ಣಿಗೆ ಮತ್ತೆ ಶಾಕ್: ಧಾರವಾಡ ಪ್ರವೇಶಕ್ಕೆ ಅವಕಾಶ ಕೊಡದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಧಾರವಾಡ (Dharwad) ಪ್ರವೇಶಕ್ಕೆ ಅನುಮತಿ ಕೋರಿದ ಕಾಂಗ್ರೆಸ್​ ನಾಯಕ ವಿನಯ್ ಕುಲಕರ್ಣಿ (Vinay Kulakarni) ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ (High Court) ವಜಾ ಮಾಡಿದೆ.

ಚುನಾವಣೆಗೆ ಸ್ಪರ್ಧಿಸಿರುವುದರಿಂದ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ವಿನಯ್​ ಕುಲಕರ್ಣಿ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್​​, ಧಾರವಾಡಕ್ಕೆ ಪ್ರವೇಶಿಸದಂತೆ ಸುಪ್ರೀಂಕೋರ್ಟ್ ನಿರ್ಬಂಧಿಸಿದೆ. ಹಾಗಿದ್ದಾಗ ಹೈಕಮಾಂಡ್ ಧಾರವಾಡದಿಂದ ಟಿಕೆಟ್ ಏಕೆ ಕೊಟ್ಟಿದೆ ಎಂದು ವಿನಯ್ ಕುಲಕರ್ಣಿ ಪರ ವಕೀಲರಿಗೆ ಪ್ರಶ್ನಿಸಿದೆ. ನಂತರ ಹೈಕೋರ್ಟ್ ವಿನಯ್​ ಕುಲಕರ್ಣಿ ಅವರ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ (Yogish Gowda) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ 90 ಸಾಕ್ಷಿಗಳಿದ್ದಾರೆ. ವಿನಯ್ ಕಲಕರ್ಣಿಗೆ​ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದರೆ ಪ್ರಕರಣಕ್ಕೆ ಸಮಸ್ಯೆಯಾಗಬಹುದು. ಸೂಚಕರ ಮೂಲಕವೇ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ಕೋರ್ಟ್​ ಮುಂದೆ ಸಿಬಿಐ ಪರ ವಕೀಲ ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನ್ಯಾಯಮೂರ್ತಿ ಬಿ. ಜಯಂತ ಕುಮಾರ್ ಅವರು ಇದ್ದ ಪೀಠ, ವಿನಯ್ ಕುಲಕರ್ಣಿ ಮನವಿಯನ್ನು ತಿರಸ್ಕರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​​ದ ತೀರ್ಪ ಆದೇಶ ಹೊರಡಿಸಿತ್ತು.

ಇದೀಗ ಹೈಕೋರ್ಟ್​ ಮೆಟ್ಟಿಲೇರಿದ್ದ ವಿನಯ್​ ಕುಲಕರ್ಣಿ ಅವರಿಗೆ ಮತ್ತೆ ಹಿನ್ನೆಡೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!