ಎಲೆಕ್ಷನ್ ಗೂ ಮೊದಲೇ ಶಾಕ್: ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ‌10 ವರ್ಷ ಜೈಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಯತ್ನಿಸಿದ್ದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾರೀ ಸೋಲು ಅನುಭವಿಸಿದ್ದಾರೆ. ಪಾಕಿಸ್ತಾನ ಸರ್ಕಾರಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ಅವರಿಗೆ ರಾವಲ್ಪಿಂಡಿ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಕಾರಣದಿಂದ ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಚುನಾವಣೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ.

ಇಮ್ರಾನ್ ಖಾನ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ಪಾಕಿಸ್ತಾನಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಅಮೆರಿಕಕ್ಕೆ ಹಸ್ತಾಂತರಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹ್ಮೂದ್‌ ಖುರೇಷಿ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಶಾ ಮಹ್ಮೂದ್‌ ಖುರೇಷಿಗೆ ತಲಾ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಇಮ್ರಾನ್ ಖಾನ್ ಅವರು ತನಿಖಾ ಅಧಿಕಾರಿಗಳಿಗೆ ರಹಸ್ಯ ದಾಖಲೆಗಳನ್ನು ಹಿಂದಿರುಗಿಸಿಲ್ಲ ಎಂದು ಫೆಡರಲ್ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದಾದ ಬಳಿಕ ಕೋರ್ಟ್‌ ಶಿಕ್ಷೆ ವಿಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!