April 3, 2026
Friday, April 3, 2026
spot_img

ಕೆಕೆಆರ್ ವಿರುದ್ಧ ಗೆದ್ರೂ ಅಭಿಷೇಕ್ ಶರ್ಮಾಗೆ ಶಾಕ್: 25% ಫೈನ್ ಕಟ್ಟಲೇಬೇಕು ಎಂದ BCCI

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ಭರ್ಜರಿ ಜಯ ಸಾಧಿಸಿದರೂ, ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾಗೆ ಬಿಸಿಸಿಐ ದಂಡ ವಿಧಿಸಿದೆ.

ಹೌದು, ಪಂದ್ಯ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಅವರ ಮ್ಯಾಚ್ ಫೀ ಯ 25 ಶೇಕಡಾ ಮೊತ್ತವನ್ನು ದಂಡವಾಗಿ ಕತ್ತರಿಸಲಾಗಿದ್ದು, ಜೊತೆಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ದಾಖಲಿಸಲಾಗಿದೆ.

ಇದನ್ನೂ ಓದಿ:

ಅಭಿಷೇಕ್ ಶರ್ಮಾ ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 21 ಎಸೆತಗಳಲ್ಲಿ 48 ರನ್ ಸಿಡಿಸಿದ್ದರು. ನಾಲ್ಕು ಸಿಕ್ಸರ್ ಮತ್ತು ನಾಲ್ಕು ಬೌಂಡರಿಗಳೊಂದಿಗೆ ಅವರು 228.57 ಸ್ಟ್ರೈಕ್ ರೇಟ್‌ನಲ್ಲಿ ಕೆಕೆಆರ್ ಬೌಲರ್‌ಗಳ ಮೇಲೆ ದಾಳಿ ನಡೆಸಿದರು.

ಆದರೆ 9ನೇ ಓವರ್‌ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಔಟಾದ ಬಳಿಕ ಅಭಿಷೇಕ್ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದಾಗಿ ಮ್ಯಾಚ್ ರೆಫರಿ ಅಭಿಪ್ರಾಯಪಟ್ಟಿದ್ದಾರೆ. ಇದೇ ಕಾರಣಕ್ಕೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !