ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರೂರಿನಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ, ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ.
ಮಾ.10ರಂದು ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ.
ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 12 ಮತ್ತು 19 ರಂದು ಸಿಬಿಐ, ನಟ ವಿಜಯ್ ಅವರನ್ನು ತನ್ನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿತ್ತು.ಇದೀಗ ಹೊಸ ನೊಟೀಸ್ ನೀಡಿದೆ .
ಸೆಪ್ಟೆಂಬರ್ 27, 2025 ರಂದು ತಮಿಳುನಾಡಿನ ಕರೂರಿನಲ್ಲಿ ವಿಜಯ್ ಅವರು ಬೃಹತ್ ರ್ಯಾಲಿ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 41 ಜನ ಮೃತಪಟ್ಟಿದ್ದರು ಮತ್ತು 60 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.
ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಪ್ರಕರಣದ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸಿಬಿಐ ನಿರ್ದೇಶಕರಿಗೆ ಸೂಚಿಸಿದ್ದು, ಸಿಬಿಐ ತನಿಖೆಯ ಮೇಲ್ವಿಚಾರಣೆ ಮಾಡಲು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಜಯ್ ರಸ್ತೋಗಿ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ಸಹ ರಚಿಸಿದೆ.



